ಯೋಗಿ ಆದಿತ್ಯನಾಥ್ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಅದನ್ನು ಪ್ರಶ್ನಿಸಿ ರಶೀದ್ ಖಾನ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರ, ಗೋರಖಪುರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ನೋಟಿಸ್ ನೀಡಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.