2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಆಮ್ ಆದ್ಮಿ ಪಕ್ಷದ ನಡುವೆ ನೇರ ಹಣಾಹಣಿ: ಕೇಜ್ರಿವಾಲ್

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಇರಲಿದೆ, ಕಾಂಗ್ರೆಸ್ ಮುನ್ನೆಲೆಯಲ್ಲಿ ಇರುವುದಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಆಮ್ ಆದ್ಮಿ ಪಕ್ಷದ ನಡುವೆ ನೇರ ಹಣಾಹಣಿ: ಕೇಜ್ರಿವಾಲ್
Updated on: 
ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಇರಲಿದೆ, ಕಾಂಗ್ರೆಸ್ ಮುನ್ನೆಲೆಯಲ್ಲಿ ಇರುವುದಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 
"ದೆಹಲಿಯಲ್ಲಿ 2019 ಕ್ಕೆ ನೇರ ಹಣಾಹಣಿ ಏರ್ಪಡುವುದು ಬಿಜೆಪಿ-ಆಪ್ ನಡುವೆ, ಶೇ.9 ರಷ್ಟು ಮತಗಳನ್ನು ಹೊಂದಿರುವ ಕಾಂಗ್ರೆಸ್ ಮುನ್ನೆಲೆಯಲ್ಲಿ ಇರುವುದಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಮಾತ್ರ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದೆ ಎಂದು ಜನತೆ ನಂಬಿದ್ದಾರೆ. ಬಿಜೆಪಿಯ ಸಂಸದರು, ಕಾಂಗ್ರೆಸ್ ಸಂಸದರು ದೆಹಲಿ ಜನರ ಬಗ್ಗೆ ಯೋಚಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಗಿಂತ ಹೆಚ್ಚು ದೆಹಲಿಯ ಜನತೆ ಆಪ್ ಪಕ್ಷದ ಮೇಲೆ ಹೆಚ್ಚು ವಿಶ್ವಾಸ ಹೊಂದಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. 
ಬಿಜೆಪಿ ವಿರುದ್ಧ ಜನತೆಗೆ ಅಸಮಾಧಾನವಿದೆ ಇದು 2019 ರ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ಕೇಜ್ರಿವಾಲ್ ಭವಿಷ್ಯ ನುಡಿದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com