ಕೇರಳ ಪ್ರವಾಹ ಪರಿಹಾರ ನಿಧಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ನೆರವು: ಸಿಜೆಐ

ಸುಪ್ರೀಂ ಕೋರ್ಟ್ ನ 25 ನ್ಯಾಯಾಧೀಶರು ಕೇರಳದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದಕ್ಕೆ ಆರ್ಥಿಕ ನೆರವು ನೀಡಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದ್ದಾರೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಸುಪ್ರೀಂ ಕೋರ್ಟ್ ನ 25 ನ್ಯಾಯಾಧೀಶರು ಕೇರಳದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದಕ್ಕೆ ಆರ್ಥಿಕ ನೆರವು ನೀಡಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದ್ದಾರೆ. 
ಪಿಐಎಲ್ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ ಸಿಜೆಐ ಹಾಗೂ ನ್ಯಾಯಮೂರ್ತಿಗಳಾದ ಎಎಂ ಖನ್ವಾಲಿಕರ್ ಹಾಗೂ ಡಿವೈ ಚಂದ್ರಚೂಡ್ ಈ ಹೇಳಿಕೆ ನೀಡಿದ್ದು,  ಪಿಐಎಲ್ ಅರ್ಜಿದಾರರು ಅನುಚಿತವಾದ ಅರ್ಜಿ ಸಲ್ಲಿಸಿದ್ದಕ್ಕಾಗಿ 25 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು. ಈ ಮೊತ್ತವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲುಪಿಸುವುದು ಸೂಕ್ತ ಎಂದು ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅಭಿಪ್ರಾಯಪಟ್ಟಿದ್ದರು. 
ಅಟಾರ್ನಿ ಜನರಲ್ ಅವರ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿರುವ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರು ನಾವೂ ಸಹ ಕೇರಳ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದಕ್ಕ ಆರ್ಥಿಕ ನೆರವು ನೀಡುತ್ತೇವೆ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನ ಮೂಲಗಳ ಪ್ರಕಾರ ನ್ಯಾಯಾಧೀಶರು ತಲಾ 25,000 ರೂಪಾಯಿ ಪರಿಹಾರ ನಿಧಿಗೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. 
ಅಟಾರ್ನಿ ಜನರಲ್ ಅವರ ಪುತ್ರ ಅಡ್ವೋಕೇಟ್ ಕೃಷ್ಣನ್ ವೇಣುಗೋಪಾಲ್ ಅವರೂ 15 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com