ಕೇರಳ ಪ್ರವಾಹ ಪರಿಹಾರಕ್ಕಾಗಿ ಯುಎಇ ರೂ.700 ಕೋಟಿ ಆರ್ಥಿಕ ನೆರವು: ಸಿಎಂ ಪಿಣರಾಯಿ ವಿಜಯನ್

ಶತಮಾನದ ಮಹಾ ಪ್ರವಾಹಕ್ಕೆ ತುತ್ತಾಗಿರುವ ಕೇರಳ ರಾಜ್ಯಕ್ಕೆ ಯುಎಇ 700 ಕೋಟಿ ರು ಗಳ ಹಣಕಾಸಿನ ನೆರವು ನೀಡುವುದಾಗಿ ಹೇಳಿದೆ...
ಕೇರಳ ಪ್ರವಾಹದಲ್ಲಿ ವೃದ್ದೆಯ ರಕ್ಷಣೆ
ಕೇರಳ ಪ್ರವಾಹದಲ್ಲಿ ವೃದ್ದೆಯ ರಕ್ಷಣೆ
ನವದೆಹಲಿ: ಶತಮಾನದ ಮಹಾ ಪ್ರವಾಹಕ್ಕೆ ತುತ್ತಾಗಿರುವ ಕೇರಳ ರಾಜ್ಯಕ್ಕೆ ಯುಎಇ 700 ಕೋಟಿ ರು ಗಳ  ಹಣಕಾಸಿನ ನೆರವು ನೀಡುವುದಾಗಿ ಹೇಳಿದೆ ಎಂದು  ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಮಧ್ಯಂತರ ಪರಿಹಾರವಾಗಿ 500 ಕೋಟಿ ರು. ಹಣ ನೀಡುವುದಾಗಿ ಘೋಷಿಸಿದ್ದರು, ಆದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರ ಹಣ ಯಾವುದಕ್ಕೂ ಸಾಕಾಗುವುದಿಲ್ಲ, ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವುದರಿಂದ ಮತ್ತಷ್ಟು ಹೆಚ್ಚಿನ ಪರಿಹಾರ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದರು.
ಈ ಸಂಬಂಧ ಟ್ವೀಟ್ ಮಾಡಿದ್ದ ರಾಹುಲ್,  ಮಾನ್ಯ ಪ್ರಧಾನಿಗಳೇ ಕೇರಳ ಜನರನ್ನು ಸಮಸ್ಯೆಯಲ್ಲಿ ಸಿಲುಕಲು ಬಿಡಬೇಡಿ ಎಂದು ಹೇಳಿದ್ದರು. 
ಸೇನಾ ಎಂಜಿನೀಯರ್ ಗಳು ಪ್ರವಾಹ ಪರಿಹಾರಕ್ಕೆ ನಿಂತಿದ್ದು, ಕ್ಯಾಪ್ಟನ್ ಅಮನ್ ಠಾಕೂರ್  ಎರ್ನಾಕುಲಂ ಜಿಲ್ಲೆಯಲ್ಲಿ  ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ, ಈ ತಂಡ ಸುಮಾರು 2032 ನಾಗರಿಕರನ್ನು ಇದುವರೆಗೂ ರಕ್ಷಿಸಿದೆ,  ಬಾರತೀಯ ಸೇನೆ ಇದುವರೆಗೂ 10629 ಮಂದಿಯನ್ನು ರಕ್ಷಿಸಿ, 49 ಸ್ಥಳಗಳಿಗೆ ಸಂಪರ್ಕ ಕಲ್ಪಿಸಿದ್ದಾರೆ.
ಇನ್ನೂ ಕರ್ನಾಟಕದ ಕೊಡಗಿನಲ್ಲಿ ಉಂಟಾಗಿರುವ ಪ್ರಹಾದಿಂದ ತೊಂದರೆಗೀಡಾಗಿರುವ ಸಂತ್ರಸ್ತರಿಗೆ ಆಹಾರ ಸಾಮಾಗ್ರಿ ನೀಡುವುದನ್ನು ನಿಲ್ಲಿಸಿಲ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಬೇಕು ಎಂದು ಜಿಲ್ಲಾ ಉಸ್ತಪುವಾರಿ ಸಚಿವ ಸಾ.ರಾ ಮಹೇಶ್ ಮನವಿ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com