ಕುಲ್ಗಾಂ ಜಿಲ್ಲೆಯ ಅವ್ಗಾಮ್ ಎಂಬಲ್ಲಿ ಫಯಾಜ್ ಅಹ್ಮದ್ ಶಾಹ್ ಎಂಬ ಪೊಲೀಸ್ ಅಧಿಕಾರಿ ಮೇಲೆ ಉಗ್ರರು ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಧಿಕಾರಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪೇದೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.