ಜಾರ್ಖಂಡ್ ನಲ್ಲಿ ಗೋಹತ್ಯೆ: ಪೊಲೀಸರ ಮೇಲೇ ಹಲ್ಲೆ ಮಾಡಿದ ಗ್ರಾಮಸ್ಥರು!
ಜಾರ್ಖಂಡ್ ನಲ್ಲಿ ಗೋಹತ್ಯೆ: ಪೊಲೀಸರ ಮೇಲೇ ಹಲ್ಲೆ ಮಾಡಿದ ಗ್ರಾಮಸ್ಥರು!

ಜಾರ್ಖಂಡ್ ನಲ್ಲಿ ಗೋಹತ್ಯೆ: ಪೊಲೀಸರ ಮೇಲೇ ಹಲ್ಲೆ ಮಾಡಿದ ಗ್ರಾಮಸ್ಥರು!

ಜಾರ್ಖಂಡ್ ನಲ್ಲಿ ನಡೆಯುತ್ತಿದ್ದ ಅಕ್ರಮ ಗೋಹತ್ಯೆ ನಿಲ್ಲಿಸಲು ಯತ್ನಿಸಿದ ಪೊಲೀಸರ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ.
ಜಾರ್ಖಂಡ್: ಜಾರ್ಖಂಡ್ ನಲ್ಲಿ ನಡೆಯುತ್ತಿದ್ದ ಅಕ್ರಮ ಗೋಹತ್ಯೆ ನಿಲ್ಲಿಸಲು ಯತ್ನಿಸಿದ ಪೊಲೀಸರ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. 
ಈದ್ ಅಂಗವಾಗಿ ಪಕುರ್ ಜಿಲ್ಲೆಯ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಗೋಹತ್ಯೆಯನ್ನು ನಿಲ್ಲಿಸಲು ಯತ್ನಿಸಿದ ನಾಲ್ವರು ಪೊಲೀಸರನ್ನು ಸ್ಥಳೀಯರು ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 
2015 ರಿಂದ ಜಾರ್ಖಂಡ್ ನಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿದೆ. ಆ.22 ರಂದು ಈದ್ ಆಚರಣೆ ಇದ್ದಿದ್ದರಿಂದ ಯಾವುದೇ ಗೋಹತ್ಯೆ ನಡೆಯದಂತೆ ಎಚ್ಚರಿಕೆ ವಹಿಸಲು ಸರ್ಕಾರ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಸೂಚನೆ ನೀಡಿತ್ತು. 
ಆದರೆ ದಂಗಾಪಾರಾ ಗ್ರಾಮದ ಮಹೇಸ್ ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋಹತ್ಯೆ ನಡೆಯುತ್ತಿರುವುದರ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಗೋಹತ್ಯೆಯನ್ನು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು ಗಾಯಗೊಂಡ ಪೊಲೀಸರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿಆ ಪ್ರದೇಶದಲ್ಲಿ ಟಿಯರ್ ಗ್ಯಾಸ್ ನ್ನು ಪ್ರಯೋಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com