ಅಂದು ಬ್ರಿಟಿಷರಿಗೆ ಸೇವೆ ಸಲ್ಲಿಸಿದವರಿಂದ ಇಂದು ಅಂಬಾನಿಗೆ ಸೇವೆ: ಕನ್ಹಯ್ಯ ಕುಮಾರ್!

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಜಎನ್ ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್, ....
ಕನ್ಹಯ್ಯ ಕುಮಾರ್
ಕನ್ಹಯ್ಯ ಕುಮಾರ್
Updated on
ಮುಂಬಯಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಜಎನ್ ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್,  ಜನ ದೇಶದ ಅಭಿವೃದ್ಧಿಗಾಗಿ ಸರ್ಕಾರದವನ್ನು ಆಯ್ಕೆ ಮಾಡುತ್ತಾರೆಯೇ ಹೊರತು ಧರ್ಮವನ್ನು ರಕ್ಷಿಸಬೇಕೆಂದು ಅಲ್ಲ ಎಂದು ಕಿಡಿಕಾರಿದ್ದಾರೆ.
ಮುಂಬಯಿ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ಹಯ್ಯ ಕುಮಾರ್.ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತು ಹಾಕುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಆದರೆ ತಮ್ಮ ಪಕ್ಷದಲ್ಲಿರುವ ಹಲವು ಭ್ರಷ್ಟ ಸಚಿವರನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ,ನರೇಂದ್ರ ಮೋದಿ ಏಕೆ ರಫೇಲ್ ಡೀಲ್ ಅಂಕಿಅಂಶದ ಬಗ್ಗೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ರಾಷ್ಚ್ರೀಯ ಅಧ್ಯಕ್ಷ ಅಮಿತ್ ಶಾ ಪುತ್ರ ಬಹುದೊಡ್ಡ ಲಾಭ ಮಾಡಿಕೊಂಡಿದ್ದಾರೆ, ಅಂದು ಬ್ರಿಟಿಷರ ಸೇವೆ ಮಾಡಿದ್ದ ಬಿಜೆಪಿಯವರು ಇಂದು ಆಂಬಾನಿಗೆ ಸೇವೆ ಸಲ್ಲಿಸುತ್ತಿದ್ದಾರೆ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹಾಗೂ ಆರ್ಥಿಕ ಅದಃಪತನ ವಾಗುತ್ತಿದೆ, ಜನ ಬಡತನ ರೇಖೆಗಿಂತ ಕೆಳಗಿನ ಮಟ್ಟದಲ್ಲಿ ಬದುಕುತ್ತಿದ್ದಾರೆ  ಎಂದು ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com