ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ನೀವು ಭಾರತೀಯ ಚಿಂತನೆಗಳ ಸುಪಾರಿ ಕಿಲ್ಲರ್ ಥರ ವರ್ತಿಸಬೇಡಿ ಎಂದು ಕಿಡಿ ಕಾರಿದ್ದು, ಕ್ಷಮೆ ಕೋರುವಂತೆ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ರಾಷ್ಟ್ರಪತಿ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಅನೇಕ ಗಣ್ಯರು ಆರ್ ಎಸ್ ಎಸ್ ಹಿನ್ನೆಲೆ ಹೊಂದಿದ್ದಾರೆ. ಇಂತಹ ಸಂಘಟನೆಯನ್ನು ಇಸ್ಲಾಮಿಕ್ ತೀವ್ರಗಾಮಿ ಸಂಘಟನೆಗೆ ಹೋಲಿಕೆ ಮಾಡುವುದು ಅಕ್ಷಮ್ಯ ಎಂದು ಹೇಳಿದ್ದಾರೆ.