ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರಜ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಶನಿವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಜಮ್ಮು; ಜಮ್ಮು ಮತ್ತು ಕಾಶ್ಮೀರಜ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಶನಿವಾರ ತಿಳಿದುಬಂದಿದೆ. 
ಶುಕ್ರವಾರ ರಾತ್ರಿ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ. 
ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನು ನೀಡಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com