ಹಿಮಾಚಲ ಪ್ರದೇಶದ ವಿಧಾನಸಭೆ ಹೊರಗೆ ಯೂತ್ ಕಾಂಗ್ರೆಸ್-ಪೊಲೀಸರ ನಡುವೆ ಮಾರಾಮಾರಿ: ಹಲವರಿಗೆ ಗಾಯ!

ಹಿಮಾಚಲ ಪ್ರದೇಶದ ವಿಧಾನಸಭೆ ಹೊರಭಾಗದಲ್ಲಿ ಕಾಂಗ್ರೆಸ್ ನ ಯುವ ಘಟಕ ಹಾಗೂ ಪೊಲೀಸರ ನಡುವೆ ಮಾರಾಮಾರಿ ನಡೆದಿದ್ದು ಹಲವರಿಗೆ ಗಾಯಗಳಾಗಿವೆ.

ಈ ಘಟನೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿಮಾಚಲ ಪ್ರದೇಶ ವಿಧಾನಸಭೆಯಿಂದ ಹೊರನಡೆದಿದ್ದು, ತನ್ನ ಹಲವು ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ ಮಾಫಿಯ ಹಾಗೂ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲು ಪ್ರತಿಭಟನಾ ನಿರತ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಆದರೆ ಅಧಿಕಾರಿಗಳು ಪ್ರತಿಭಟನಾ ನಿರತರನ್ನು ಜಲಫಿರಂಗಿ  ಬಳಸಿ ತಡೆಯಲು ಯತ್ನಿಸಿದರಷ್ಟೇ ಅಲ್ಲದೇ ಲಾಠಿ ಚಾರ್ಜ್ ಕೂಡಾ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಪೊಲೀಸ್ ಲಾಠಿ ಚಾರ್ಜ್ ವೇಳೆ ಪೊಲೀಸ್ ಅಧಿಕಾರಿಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. 
ಈ ಘಟನೆ ವಿಧಾನಸಭೆಯಲ್ಲಿ ಚರ್ಚೆಗೆ ಬಂದಿದ್ದು ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದಕ್ಕೂ ಕಾರಣವಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com