ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಗಡಿಯಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾಪಡೆ ನಾಲ್ವರು ಉಗ್ರರನ್ನು ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾಪಡೆ ನಾಲ್ವರು ಉಗ್ರರನ್ನು ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. 
ಹಂದ್ವಾರದ ಕಲರೂಸ್ ಪ್ರದೇಶದಲ್ಲಿರುವ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ನತ್ತ ಗಡಿ ಹೊರ ನುಸುಳಲು ಸಿದ್ಧವಾಗಿದ್ದ ನಾಲ್ವರು ಅಲ್ ಬದ್ರ್ ಸಂಘಟನೆಯ ಉಗ್ರರನ್ನು ಸೇನೆ ಸಜೀವವಾಗಿ ಬಂಧನಕ್ಕೊಳಪಡಿಸಿದೆ. 
ಗಡಿ ನುಸುಳಲು ಈ ಉಗ್ರರು ನೇಮಕಾತಿಗಳನ್ನು ನಡೆಸುತ್ತಿದ್ದರು. ಈ ಕುರಿತ ಮಾಹಿತಿ ತಿಳಿದ ಸೇನಾಪಡೆ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆಗಳಿದಿದ್ದರು. ಈ ವೇಳೆ ಸ್ಥಳದಲ್ಲಿ ಸುದೀರ್ಘ ಗುಂಡಿನ ಕಾಳಗ ನಡೆದಿತ್ತು. ಈ ವೇಳೆ ಉಗ್ರರಿಗೆ ಶರಣಾಗಲು ಅವಕಾಶ ನೀಡಲಾಯಿತು. ಬಳಿಕ ಹೊಸದಾಗಿ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ ನಾಲ್ವರು ಉಗ್ರರು ಶರಣಾಗತಿಯಾದರು ಎಂದು ಸೇನೆ ಮಾಹಿತಿ ನೀಡಿದೆ. 
ಕಾರ್ಯಾಚರಣೆ ವೇಳೆ ಕೆಲ ಉಗ್ರರು ಪರಾರಿಯಾಗಿದ್ದು, ಉಗ್ರರಿಗಾಗಿ ಹುಡುಕಾಟ ಆರಂಭವಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com