ಲೋಕಸಭಾ ಚುನಾವಣೆ: ಪಕ್ಷಗಳನ್ನು ವಿಭಜಿಸಿ ಗೆಲುವು ಸಾಧಿಸಲು ಅಮಿತ್ ಶಾ ರಣತಂತ್ರ!
ಪಕ್ಷಗಳ ವಿಭಜನೆ ಹಾಗೂ ವೀಲಿನದಲ್ಲಿ ಚಾಣಕ್ಯ ಎಂದೇ ಕರೆಸಿಕೊಳ್ಳುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ,2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ.
ನವ ದೆಹಲಿ: ಪಕ್ಷಗಳ ವಿಭಜನೆ ಹಾಗೂ ವೀಲಿನದಲ್ಲಿ ಚಾಣಕ್ಯ ಎಂದೇ ಕರೆಸಿಕೊಳ್ಳುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ,2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಎಸ್ ಪಿ ಪ್ರಭಾವ ತಗ್ಗಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯತಂತ್ರ ರೂಪಿಸಲಾಗಿದೆ. ಅಲ್ಲದೇ, ಬಿಜೆಪಿ ಮುಖ್ಯಸ್ಥೆ ಮಾಯಾವತಿ ಅವರಿಂದ ಬಿಜೆಪಿಗೆ ದೊಡ್ಡ ಮಟ್ಟದ ಹೊಡೆತ ಬೀಳದಂತೆಯೂ ಮುನ್ನೆಚ್ಚರಿಕೆ ವಹಿಸಲಾಗಿದೆ.