ಮುಂದಿನ ತಿಂಗಳು ಸುಷ್ಮಾ ಸ್ವರಾಜ್ ರಿಂದ ಪಾಕ್ ವಿದೇಶಾಂಗ ಸಚಿವರ ಭೇಟಿ ಸಾಧ್ಯತೆ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮುಂದಿನ ತಿಂಗಳು ನ್ಯೂಯಾರ್ಕ್ ನಲ್ಲಿ ಪಾಕಿಸ್ತಾನದ ವಿದೇಶಾಂಗ...
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮುಂದಿನ ತಿಂಗಳು ನ್ಯೂಯಾರ್ಕ್ ನಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಶಾಹ್ ಮಹ್ಮೂದ್ ಖುರೇಶಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಸುಷ್ಮಾ ಸ್ವರಾಜ್ ಅವರು ನ್ಯೂಯಾರ್ಕ್ ನಲ್ಲಿ ಸೆಪ್ಟೆಂಬರ್ 18ರಿಂದ ಆರಂಭವಾಗುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುತ್ತಿದ್ದು, ಈ ವೇಳೆ ಪಾಕ್ ವಿದೇಶಾಂಗ ಸಚಿವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಈ ತಿಂಗಳು 22ರಂದು ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರು ಸಹ ಸುಷ್ಮಾ ಸ್ವರಾಜ್ ಮತ್ತು ಖುರೇಶಿ ಮಾತುಕತೆ ನಡೆಸುವ ಮೂಲಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದರು.
ಇದಕ್ಕು ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಇಮ್ರಾನ್ ಖಾನ್ ಅವರಿಗೆ ಶುಭಾಶಯ ಕೋರಿ, ಪತ್ರ ಬರೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com