ದೆಹಲಿ ಸಹ ಭಾರತದ ಒಂದು ಭಾಗ: ಮೋದಿ ಸರ್ಕಾರದ ವಿರುದ್ಧ ಸಿಸೋಡಿಯಾ ವಾಗ್ದಾಳಿ

ಮಾಸ್ಕೋ ಭೇಟಿಗೆ ಅನುಮತಿ ನೀಡದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ...
ಮನಿಶ್ ಸಿಸೋಡಿಯಾ
ಮನಿಶ್ ಸಿಸೋಡಿಯಾ
ನವದೆಹಲಿ: ಮಾಸ್ಕೋ ಭೇಟಿಗೆ ಅನುಮತಿ ನೀಡದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು, ದೆಹಲಿ ಸಹ ಭಾರತದ ಒಂದು ಭಾಗ ಎಂದು ಹೇಳಿದ್ದಾರೆ.
ಮಾಸ್ಕೋದಲ್ಲಿ ನಡೆಯುತ್ತಿರುವ ವಿಶ್ವ ಶಿಕ್ಷಣ ಸಮ್ಮೇಳನದಲ್ಲಿ ದೆಹಲಿ ಶಿಕ್ಷಣ ಸುಧಾರಣೆ ಬಗ್ಗೆ ಮಾತನಾಡಲು ನನಗೆ ಆಹ್ವಾನ ಬಂದಿದೆ. ಇಂದು ರಾತ್ರಿಯೇ ನಾನು ರಷ್ಯಾದ ರಾಜಧಾನಿ ಮಾಸ್ಕೋಗೆ ತೆರಳಬೇಕಿತ್ತು. ಆದರೆ ಕೇಂದ್ರ ಸರ್ಕಾರ ನನ್ನ ಮಾಸ್ಕೋ ಭೇಟಿಗೆ ಅನುಮತಿ ನೀಡದಿರುವುದು ದುರದೃಷ್ಟಕರ ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.
ನಾನು ಮಾಸ್ಕೋ ಭೇಟಿಗೆ ಅನುಮತಿ ಕೋರಿ 10 ದಿನಗಳ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇನೆ. ಆದರೆ ಇನ್ನೂ ಅನುಮತಿ ನೀಡಿಲ್ಲ ಎಂದಿದ್ದಾರೆ.
ಕಳೆದ ಕೆಲವು ತಿಂಗಳಿಂದ ದೆಹಲಿಯಲ್ಲಿನ ಶಿಕ್ಷಣ ಸುಧಾರಣೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಸಿಕ್ಕಿದೆ. ಆದರೆ ಪ್ರಧಾನಿ ಮೋದಿ ಅವರು ಅದನ್ನು ಅಂತರಾಷ್ಟ್ರೀಯ ವೇದಿಕೆಗೆ ಕೊಂಡೊಯ್ಯದಿರುವುದು ದುರದೃಷ್ಟಕರ ಎಂದು ದೆಹಲಿ ಡಿಸಿಎಂ ಸರಣಿ ಟ್ವೀಟ್ ಮಾಡಿದ್ದಾರೆ.
ಸರ್, ದೆಹಲಿ ಸಹ ಭಾರತದ ಒಂದು ಭಾಗ. ನಮ್ಮ ಶಾಲೆಗಳಿಗೆ ಅಂತರಾಷ್ಟ್ರೀಯ ಮನ್ನಣೆ ಸಿಕ್ಕರೆ ಭಾರತ ಹೆಮ್ಮೆ ಪಡುವ ವಿಚಾರ ಎಂದು ಸಿಸೋಡಿಯಾ ಮತ್ತೊಂದು ಟ್ವೀಟ್ ಮಾಡಿದ್ದಾರೆ.
ದೆಹಲಿ ಸರ್ಕಾರದಲ್ಲಿ ಶಿಕ್ಷಣ ಖಾತೆಯನ್ನು ಹೊಂದಿರುವ ಸಿಸೋಡಿಯಾ ಅವರು ಸರ್ಕಾರ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದ್ದು, ಸರ್ಕಾರಿ ಶಾಲೆಯಲ್ಲಿ 12ನೇ ತರಗತಿವರೆಗೆ ಶೇ.100ರಷ್ಟು ಉಚಿತ ಶಿಕ್ಷಣ ನೀಡುವುದಾಗಿ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com