ಕೋಲ್ಕತಾ: ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ ಶಾ ಅವರಿಗೆ ಕೋಲ್ಕತಾ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಟಿಎಂಸಿ ಸಂಸದ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಅವರು ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಅಮಿತ್ ಶಾ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್, ಬಿಜೆಪಿ ಅಧ್ಯಕ್ಷರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಅಭಿಷೇಕ್ ಬ್ಯಾನರ್ಜಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಬೇಕು ಎಂದು ಅಮಿತ್ ಶಾ ಅವರಿಗೆ ಆಗಸ್ಟ್ 13ರಂದು ಲೀಗಲ್ ನೋಟಿಸ್ ಕಳುಹಿಸಿದ್ದರು. ಒಂದು ವೇಳೆ ಕ್ಷಮೆ ಕೇಳದಿದ್ದರೆ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ಸಹ ನೀಡಿದ್ದರು.