ದೇಶದ ಜನತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ, ರಾಡಿ ಎಬ್ಬಿಸುವುದು ಸಭ್ಯ ಸಮಾಜದ ವರ್ತನೆಯಲ್ಲ, ಈ ವಿಷಯ ಯಾವುದೇ ಸಿದ್ಧಾಂತಕ್ಕೆ ಸಂಬಂಧಿಸಿದ್ದಲ್ಲ ಬದಲಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಸಾಧ್ಯವಾದಷ್ಟೂ ಒಳ್ಳೆಯ ಸಂಗತಿಗಳತ್ತ ಗಮನ ಹರಿಸುವುದಕ್ಕೆ ತಮ್ಮನ್ನು ತಾವು ತರಬೇತುಗೊಳಿಸಿಕೊಳ್ಳಬೇಕು ಎಂದು ಮೋದಿ ಕರೆ ನೀಡಿದ್ದಾರೆ.