ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 1-2 ಉಗ್ರರು ಅಡಗಿರುವ ಶಂಕೆ

ಜಮ್ಮು ಮತ್ತು ಕಾಶ್ಮೀರ ಅನಂತ್ ನಾಗ್ ಜಿಲ್ಲೆಯಲ್ಲಿ 1-2 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ಆರಂಭಿಸಿವೆ ಎಂದು ಬುಧವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಅನಂತ್'ನಾಗ್: ಜಮ್ಮು ಮತ್ತು ಕಾಶ್ಮೀರ ಅನಂತ್ ನಾಗ್ ಜಿಲ್ಲೆಯಲ್ಲಿ 1-2 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ಆರಂಭಿಸಿವೆ ಎಂದು ಬುಧವಾರ ತಿಳಿದುಬಂದಿದೆ. 
ಅನಂತ್ ನಾಗ್ ಜಿಲ್ಲೆಯ ಮುಂದ್ವಾರ್ಡ್ ಎಂಬದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ತಿಳಿದುಬಂದಿದ್ದು, ಭಾರತೀಯ ಸೇನೆ ಹಾಗೂ ಸಿಆರ್'ಪಿಎಫ್ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಗಳು ತಿಳಿಸಿವೆ. 
ಪ್ರಸ್ತುತ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿದ್ದು, ಭಾರೀ ಕಾರ್ಯಾಚರಣೆ ಆರಂಭಿಸಿವೆ. ಈ ನಡುವೆ ಯಾವುದೇ ರೀತಿಯ ವದಂತಿಗಳು ಹರಡದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com