ಎಸ್ಸಿ/ಎಸ್ಟಿ ಸದಸ್ಯರು ಮತ್ತೊಂದು ರಾಜ್ಯದಲ್ಲಿ ಮೀಸಲಾತಿ ಪಡೆಯುವಂತಿಲ್ಲ: ಸುಪ್ರೀಂ

Published On :
ನವದೆಹಲಿ: ಒಂದು ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ(ಎಸ್'ಸಿ/ಎಸ್'ಟಿ)ದ ಸದಸ್ಯರು ಮತ್ತೊಂದು ರಾಜ್ಯದಲ್ಲಿ ಮೀಸಲಾತಿ ಸೌಲಭ್ಯ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಗುರವಾರ ಹೇಳಿದೆ.
ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಮತ್ತೊಂದು ರಾಜ್ಯಕ್ಕೆ ವಲಸೆಹೋದ ಎಸ್ಸಿ/ಎಸ್ಟಿ ಸದಸ್ಯರು ಆ ರಾಜ್ಯದಲ್ಲಿ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಪಡೆಯಲು ಅರ್ಹರಲ್ಲ ಎಂದು ನ್ಯಾಯಮೂರ್ತಿ ರಂಜನ್ ಗೋಗೊಯಿ ನೇತೃತ್ವದ ಸಂವಿಧಾನಿಕ ಪೀಠ ಸ್ಪಷ್ಟಪಡಿಸಿದೆ.
ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ ಎಂದು ಸೂಚಿಸಿದ ವ್ಯಕ್ತಿಯು ಮತ್ತೊಂದು ರಾಜ್ಯದಲ್ಲಿಯೂ ತಾನು ಪರಿಶಿಷ್ಟ ಜಾತಿಯ ವ್ಯಕ್ತಿ ಎಂದು ಘೋಷಿಸಲ್ಪಟ್ಟಿದೆ ಎಂಬ ಆಧಾರದ ಮೇಲೆ ಮೀಸಲಾತಿ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಇತರೆ ರಾಜ್ಯಗಳ ಎಸ್ಸಿ/ಎಸ್ಟಿ ಸದಸ್ಯರು ದೆಹಲಿಯ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಪಡೆಯಬಹುದೆ ಎಂಬ ಕುರಿತು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ಈ ತೀರ್ಪು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


