ಅಸ್ಸಾಂನ ಉದಲಗುರಿ ಜಿಲ್ಲೆಯಲ್ಲಿ ಕಾಮಕ್ಯ-ದೇಕರ್ಗಾವ್ ಇಂಟರ್ಸಿಟಿ ಎಕ್ಸ್ಪ್ರೆಸ್ನಲ್ಲಿ ಈ ಸ್ಫೋಟ ಸಂಭವಿಸಿದ್ದು, ಅವಘಡದಲ್ಲಿ 11 ಜನರು ಗಾಯಗೊಂಡಿದ್ದಾರೆ. ಶನಿವಾರ ಸಂಜೆ 6.45ರ ಸುಮಾರಿಗೆ ಚಲಿಸುತ್ತಿದ್ದ ರೈಲಿನ ಬೋಗಿಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಸ್ಥಳದ ರಾಜಧಾನಿ ಗುವಾಹತಿಯಿಂದ ಸುಮಾರು 95 ಕಿ.ಮೀ. ದೂರದಲ್ಲಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಟ್ರತ್ರೆಗೆ ದಾಖಲಿಸಲಾಗಿದೆ. ಓರ್ವ ಪ್ರಯಾಣಿಕನಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.