ನಿಜಾಮರಂತೆ ಓವೈಸಿ ಕೂಡ ತೆಲಂಗಾಣದಿಂದ ಪಲಾಯನ ಮಾಡಬೇಕಾಗುತ್ತದೆ: ಯೋಗಿ ಆದಿತ್ಯನಾಥ್

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಮುಖಂಡ ನಾಯಕ ಅಸಾದುದ್ದೀನ್ ಓವೈಸಿ ಕೂಡ ನಿಜಾಮರಂತೆ ತೆಲಂಗಾಣದಿಂದ ಪಲಾಯನ ಮಾಡಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಸಿಎಂ ಯೋಗಿ ಆದಿತ್ಯಾನಾಥ್
ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಸಿಎಂ ಯೋಗಿ ಆದಿತ್ಯಾನಾಥ್
Updated on
ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಮುಖಂಡ ನಾಯಕ ಅಸಾದುದ್ದೀನ್ ಓವೈಸಿ ಕೂಡ ನಿಜಾಮರಂತೆ ತೆಲಂಗಾಣದಿಂದ ಪಲಾಯನ ಮಾಡಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರದ ನಿಮಿತ್ತ ಇಂದು ವಿಕಾರಾಬಾದ್ ಜಿಲ್ಲೆಯ ತಂದೂರ್ ನಗರದಲ್ಲಿ ಏರ್ಪಡಿಸಲಾಗಿದ್ದ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ ಆದಿತ್ಯನಾಥ್, 'ಉಗ್ರಗಾಮಿ ಹಾಗೂ ಐಸಿಸ್ ಸಂಘಟನೆಗಳೊಂದಿಗೆ ಸಂಬಂಧಗಳನ್ನು ಹೊಂದಿರುವ ಸಂಘಟನೆಗಳ ಕೈಯಲ್ಲಿ ದೇಶದ ರಕ್ಷಣೆ ಸಾಧ್ಯವೇ? ದೇಶದ ಕುರಿತು ಬದ್ಧತೆ ಹೊಂದಿರುವ ಯುವಕರ ಸಂಘಟನೆಯಿಂದ ದೇಶ ನಡೆಯಬೇಕೇ ಅಥವಾ ಕಾಂಗ್ರೆಸ್ ನಂತಹ ಪಕ್ಷ ನಾಯಕರ ಮುಂದಾಳತ್ವದಲ್ಲಿ ದೇಶ ನಡೆಯಬೇಕೇ ಎನ್ನುವುದನ್ನು ನೀವೇ ನಿರ್ಧಾರ ಮಾಡಿ ಎಂದರು. ಅಲ್ಲದೇ ತೆಲುಗು ದೇಶಂ ಪಕ್ಷ (ಟಿಡಿಪಿ) ಹಾಗೂ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‍ಎಸ್) ಪಕ್ಷಗಳು ನಕ್ಸಲ್ ಹಾಗೂ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.
ಇದೇ ವೇಳೆ ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ ಆದಿತ್ಯಾನಾಥ್, ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಿಕ್ಕೆ ಬಂದರೆ ನಿಜಾಮರ ರೀತಿಯಲ್ಲೇ ಒವೈಸಿ ಕೂಡ ತೆಲಂಗಾಣ ತೊರೆಯಬೇಕಾಗುತ್ತದೆ. ಬಿಜೆಪಿ ಪಕ್ಷ ಎಲ್ಲರಿಗೂ ಭದ್ರತೆ ನೀಡುತ್ತದೆ. ಆದರೆ ರಾಷ್ಟ್ರೀಯ ಹಿತಾಸಕ್ತಿಗೆ ತೊಂದರೆ ಉಂಟುಮಾಡುವವರಿಗೆ ಸೂಕ್ತ ದಾರಿ ತೋರಿಸುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com