ಬಿಲಾಲ್ ಶ್ರೀನಗರದ ಖನ್ಯಾರ್ ಗ್ರಾಮದ ನಿವಾಸಿಯಾಗಿದ್ದು, ನೋಯ್ಡಾದ ಶಾರದಾ ವಿವಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ. ಆದರೆ ಕಳೆದ ಅಕ್ಟೋಬರ್ ಬಳಿಕ ನಾಪತ್ತೆಯಾಗಿದ್ದ. ಕಳೆದ ತಿಂಗಳು ಬಿಲಾಲ್ ಕಪ್ಪು ಬಣ್ಣದ ಧಿರಿಸು ತೊಟ್ಟು, ಶಸ್ತ್ರ ಮತ್ತು ಐಸಿಸ್ ಧ್ವಜ ಹಿಡಿದುಕೊಂಡಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು. ಈ ಮಧ್ಯೆ, ಕಾಣೆಯಾಗಿರುವ ತಮ್ಮ ಪುತ್ರನನ್ನು ಹುಡುಕಿಕೊಡುವಂತೆ ಬಿಲಾಲ್‌ನ ಪೋಷಕರು ಪೊಲೀಸರಲ್ಲಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರು.