
ವಿಜಯ್ ನಗರ: ರಾಮ ಮಂದಿರ ನಿರ್ಮಾಣಕ್ಕೆ ಬೆದರಿಕೆಯೊಡಿದ್ದರೆ ಜೈಸ್ ಇ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಝಾರ್ ಮೇಲೆ ಮುಂದಿನ ಸರ್ಜಿಕಲ್ ಸ್ಟ್ರೈಕ ನಡೆಸಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ರಾಜಸ್ತಾನ ವಿಧಾನಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ ಆದಿತ್ಯನಾಥ್, ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ಬದ್ಧವಾಗಿರುವುದಾಗಿ ತಿಳಿಸಿದರು.
ಒಂದು ವೇಳೆ ರಾಮಮಂದಿರ ನಿರ್ಮಾಣಕ್ಕೆ ಮಸೂದ್ ಅಝಾರ್ ಬೆದರಿಕೆಯೊಡಿದ್ದರೆ ಆತನ ಮೇಲೆಯೇ ಮುಂದಿನ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗುವುದು, ಅಲ್ಲದೇ, ಆತನ ಗುರುವನ್ನು ಉಳಿಸುವುದಿಲ್ಲ ಎಂದು ಹೇಳಿದರು.
Advertisement