ತಲೆಗೆ ಬಿದ್ದ ಗುಂಡೇಟಿನಿಂದ ಬುಲಂದಶಹರ್ ಪೊಲೀಸ್ ಅಧಿಕಾರಿ ಸಾವು: ಮರಣೋತ್ತರ ಪರೀಕ್ಷೆ ವರದಿ

ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ ಪೊಲೀಸ್ ಅಧಿಕಾರಿಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದ್ದು....
ಬುಲಂದಶಹರ್ ಪೊಲೀಸ್ ಅಧಿಕಾರಿ
ಬುಲಂದಶಹರ್ ಪೊಲೀಸ್ ಅಧಿಕಾರಿ
ಬುಲಂದಶಹರ್: ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ ಪೊಲೀಸ್ ಅಧಿಕಾರಿಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದ್ದು, 3.2 ಎಂಎಂ ಬೋರ್ ಬುಲೆಟ್ ನಿಂದ ತಲೆಗೆ ಉಂಟಾದ ಗಾಯದಿಂದಾಗಿ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಹೇಳಿದೆ. 
ಬುಲೆಟ್ ನಿಂದ ತಲೆಗೆ ಉಂಟಾದ ಗಾಯದಿಂದಾಗಿ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕೂ ಮುನ್ನ ಮೃತ ಪೊಲೀಸ್ ಅಧಿಕಾರಿಯ ಕುಟುಂಬ ಸದಸ್ಯರು ಪೊಲೀಸ್ ಅಧಿಕಾರಿಯ ವಿರುದ್ಧ ಇಲಾಖೆಯವರೇ ಷಡ್ಯಂತ್ರ ರೂಪಿಸಿದ್ದರು ಎಂದು ಆರೋಪಿಸಿದ್ದರು. 
ಈ ನಡುವೆ ಪೊಲೀಸ್ ಅಧಿಕಾರಿಯ ಸಾವಿಗೆ ಗುಪ್ತಚರ ಮಾಹಿತಿ ವೈಫಲ್ಯವೇ ಕಾರಣವೇ ಎಂಬ ಪ್ರಶ್ನೆಗೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ಈಗಲೇ ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ, ತನಿಖೆ ಪೂರ್ಣಗೊಳ್ಳುವವರೆಗೂ ಇಲಾಖೆಯ ಯಾವ ಅಧಿಕಾರಿಯ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಅಡಿಜಿ ಆನಂದ್ ಕುಮಾರ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com