
ನವದೆಹಲಿ: ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಧ್ವಂಸ ವರ್ಷಾಚರಣೆ ಅಂಗವಾಗಿ ಡಿಸೆಂಬರ್ 6ನ್ನು ಶೌರ್ಯ ದಿವಸವನ್ನಾಗಿ ಆಚರಿಸಲು ವಿಶ್ವ ಹಿಂದೂ ಪರಿಷತ್ ಚಿಂತನೆ ನಡೆಸಿದೆ. ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ಸೂಚಕವಾಗಿ ಡಿಸೆಂಬರ್ 18 ರಂದು ಗೀತಾ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
2019 ರ ಲೋಕಸಭಾ ಚುನಾವಣೆ ಹತ್ತಿರವಿರುವಂತೆ ಎಲ್ಲಾರ ಕಣ್ಣು ರಾಮ ಮಂದಿರ ನಿರ್ಮಾಣದತ್ತ ನೆಟ್ಟಿದೆ. ದೇವಾಲಯ ನಿರ್ಮಾಣಕ್ಕಾಗಿ ಬಾಬ್ರಿ ಮಸೀದಿ ಧ್ವಂಸಗೊಳಿಸಿದ್ದಕ್ಕೆ 26 ವರ್ಷ ಸಂದಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳು ಶೌರ್ಯ ದಿವಸ್ ಆಗಿ ಆಚರಿಸುವ ಸಾಧ್ಯತೆ ಇದೆ.
Advertisement