ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ!

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರ ಸಹೋದರ ಪ್ರಹ್ಲಾದ್ ಮೋದಿಯೇ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿದ್ದು ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ಯೋಜನೆಯೊಂದನ್ನು ಮರುಪರಿಶೀಲನೆ
ಪ್ರಹ್ಲಾದ್ ಮೋದಿ-ನರೇಂದ್ರ ಮೋದಿ
ಪ್ರಹ್ಲಾದ್ ಮೋದಿ-ನರೇಂದ್ರ ಮೋದಿ
ಔರಂಗಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರ ಸಹೋದರ ಪ್ರಹ್ಲಾದ್ ಮೋದಿಯೇ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿದ್ದು ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ಯೋಜನೆಯೊಂದನ್ನು ಮರುಪರಿಶೀಲನೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 
ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಂಬಂಧಪಟ್ಟ ನೇರ ಲಾಭ ವರ್ಗಾವಣೆ  ಯೋಜನೆಯನ್ನು ಮರುಪರಿಶೀಲನೆ ಮಾಡಬೇಕೆಂದು ಪ್ರಹ್ಲಾದ್ ಮೋದಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನೇರ ಲಾಭ ವರ್ಗಾವಣೆ ಯೋಜನೆಯಿಂದಾಗಿ ರೇಷನ್ ಶಾಪ್ ಮಾಲಿಕರಿಗೆ ದ್ರೋಹವಾಗಿದೆ ಎಂಬ ಆರೋಪ ಕೇಳಿಬಂದಿದೆ. 
ಇದೇ ವೇಳೆ ತಮ್ಮ ಪ್ರತಿಭಟನೆಯ ವಿಷಯವನ್ನೇ ಲಾಭವಾಗಿ  ಬಳಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧವೂ ಪ್ರಹ್ಲಾದ್ ಮೋದಿ ಹೌಹಾರಿದ್ದು, ನರೇಂದ್ರ ಮೋದಿ ಸರ್ಕಾರ ನೋಟು ನಿಷೇಧ ಜಿಎಸ್ ಟಿ ಜಾರಿಗೆ ತಂದಿದ್ದು ಕೆಲವರಿಗೆ ನೋವು ಉಂಟುಮಾಡಿರಬಹುದು ಆದರೆ ನ್ಯಾಯಯುತವಾಗಿ ಉದ್ಯಮ ಮಾಡುವವರಿಗೆ ಇದರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂದಿದ್ದಾರೆ. 
ಅಖಿಲ ಭಾರತೀಯ ನ್ಯಾಯಬೆಲೆ ಅಂಗಡಿ ಡೀಲರ್ಸ್ ಒಕ್ಕೂಟದ ಉಪಾಧ್ಯಕ್ಷರಾಗಿರುವ ಪ್ರಹ್ಲಾದ್ ಮೋದಿ, ಔರಂಗಾಬಾದ್ ಜಿಲ್ಲಾ ನ್ಯಾಯ ಬೆಲೆ ಅಂಗಡಿ ಪೂರೈಕೆದಾರರ ಒಕ್ಕೂಟ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಹ್ಲಾದ್ ಮೋದಿ, ನೇರ ಲಾಭ ವರ್ಗಾವಣೆ ಯೋಜನೆಯನ್ನು ಮರುಪರಿಶೀಲನೆ ಮಾಡಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೂ ಆಗ್ರಹಿಸಿದ್ದು, ಜನತೆ ಹಾಗೂ ಅಂಗಡಿ ಮಾಲಿಕರು ಇಬ್ಬರಿಗೂ ಸಮಸ್ಯೆಯಾಗದಂತೆ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com