2019 ಲೋಕಸಭಾ ಚುನಾವಣೆ: ಪುಣೆಯಿಂದ ಮಾಧುರಿ ದೀಕ್ಷಿತ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?

2019 ರ ಲೋಕಸಭಾ ಚುನಾವಣೆಯಲ್ಲಿ ಪುಣೆಯಿಂದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬುದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
Madhuri Dixit , Amit Shah
Madhuri Dixit , Amit Shah

ಮುಂಬೈ: 2019 ರ ಲೋಕಸಭಾ ಚುನಾವಣೆಯಲ್ಲಿ ಪುಣೆಯಿಂದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬುದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಜೂನ್ ತಿಂಗಳಲ್ಲಿ ಸಮರ್ಥನಾ ಸಂಪರ್ಕ ಅಭಿಯಾನದ ಅಂಗವಾಗಿ ಮಾಧುರಿ ದೀಕ್ಷಿತ್ ಅವರ ಮನೆಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ದೀಕ್ಷಿತ್ ಅವರೊಂದಿಗೆ ಹಂಚಿಕೊಂಡಿದ್ದರು.
ಪುಣೆ ಲೋಕಸಭಾ ಕ್ಷೇತ್ರದಲ್ಲಿನ ಬಿಜೆಪಿ  ಅಭ್ಯರ್ಥಿಗಳ ಕಿರುಪಟ್ಟಿಯಲ್ಲಿ ಮಾಧುರಿ ದೀಕ್ಷಿತ್ ಅವರ ಹೆಸರು ಇರುವುದಾಗಿ ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com