ಹೋಟೆಲ್ ನಲ್ಲಿ ಮಗನ ಎದುರೇ ಪತ್ನಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ವ್ಯಕ್ತಿಯೊಬ್ಬ ತನ್ನ ಮಗನ ಮುಂದೆಯೇ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಹಾರಾಷ್ಟ್ರದ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮುಂಬೈ: ವ್ಯಕ್ತಿಯೊಬ್ಬ ತನ್ನ ಮಗನ ಮುಂದೆಯೇ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಹಾರಾಷ್ಟ್ರದ ಪ್ರಸಿದ್ಧ ಮಹಾಬಲೇಶ್ವರ ಬೆಟ್ಟದಲ್ಲಿ ನಡೆದಿದೆ.
ವೃತ್ತಿಯಲ್ಲಿ ಚಾಲಕನಾಗಿದ್ದ ಅನಿಲ್ ಶಿಂದೆ(34) ಎಂಬ ವ್ಯಕ್ತಿ ಪತ್ನಿ ಹಾಗೂ ತನ್ನ 11 ವರ್ಷದ ಮಗನೊಂದಿಗೆ ಸತಾರ ಜಿಲ್ಲೆಯ ಮಹಾಬಲೇಶ್ವರಕ್ಕೆ ಪ್ರವಾಸಕ್ಕೆ ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹೋಟೆಲ್ ನಲ್ಲಿ ತಂಗಿದ್ದ ದಂಪತಿ ಮಧ್ಯೆ ನಿನ್ನೆ ರಾತ್ರಿ ಜಗಳವಾಗಿದ್ದು, ತಾಳ್ಮೆ ಕಳೆದುಕೊಂಡ ಶಿಂದೆ ಚಾಕುವಿನಿಂದ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಗ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ತಂದೆಯನ್ನು ತಡೆಯಲು ಮಗ ಸಾಕಷ್ಟು ಯತ್ನಿಸಿದ್ದಾರೆ. ಆದರೆ ಸಾಧ್ಯವಾಗದಿದ್ದಾಗ ಹೋಟೆಲ್ ಮಾನೇಜರ್ ಗೆ ವಿಷಯ ತಿಳಿಸಿದ್ದಾನೆ. ಮ್ಯಾನೇಜರ್ ಕೂಡಲೇ ಪೊಲೀಸರಿಗೆ ಮಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ತಕ್ಷಣ ದಂಪತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಈ ಸಂಬಂಧ ಪೊಲೀಸರು ಕೊಲೆ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com