ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ದೆಹಲಿ ಮೂಲದ ವಕೀಲ ಎಂಎಲ್ ಶರ್ಮಾ ಅವರಿಗೆ ಕೋರ್ಟ್ 50 ಸಾವಿರ ರುಪಾಯಿ ದಂಡ ವಿಧಿಸಿದೆ.
ಕೇಂದ್ರ ಸಚಿವರ ವಿರುದ್ಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾ ಮಾಡಿರುವ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದ ಎಂಎಲ್ ಶರ್ಮಾಗೆ 50 ಸಾವಿರ ದಂಡ ವಿಧಿಸಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಬಂಡವಾಳ ಮೀಸಲು ಹಣವನ್ನು ಲೂಟಿ ಮಾಡಲಾಗಿದೆ ಎಂದು ಎಂಎಲ್ ಶರ್ಮಾ ಸುಪ್ರಿಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.