ಪರಾರಿಯಾಗಿರುವ ಆರ್ಥಿಕ ಅಪರಾಧಿ ಘೋಷಣೆ ವಿರುದ್ಧ ಮಲ್ಯ ಅರ್ಜಿ: ಇಡಿ ಗೆ ಸುಪ್ರೀಂ ಕೋರ್ಟ್ ನೊಟೀಸ್

ಮದ್ಯದ ಉದ್ಯಮಿ ಸುಸ್ತಿದಾರ ವಿಜಯ್ ಮಲ್ಯ, ತಮ್ಮನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು...
ವಿಜಯ್ ಮಲ್ಯ
ವಿಜಯ್ ಮಲ್ಯ
ನವದೆಹಲಿ: ಮದ್ಯದ ಉದ್ಯಮಿ ಸುಸ್ತಿದಾರ ವಿಜಯ್ ಮಲ್ಯ, ತಮ್ಮನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು ನಡೆಯುತ್ತಿರುವ ಪ್ರಕ್ರಿಯೆ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಈಗ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೊಟೀಸ್ ಜಾರಿ ಮಾಡಿದೆ. 
ಮಲ್ಯ ಅವರನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೊಷಿಸುವುದಕ್ಕೆ ಮುಂಬೈ ಕೋರ್ಟ್ ನಲ್ಲಿ ಪ್ರಕ್ರಿಯೆಗಳು ಚಾಲನೆಯಲ್ಲಿವೆ. ಈ ಪ್ರಕ್ರಿಯೆಯನ್ನು ಪ್ರಶ್ನಿಸಿ ವಿಜಯ್ ಮಲ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.  ಮಲ್ಯ ಅರ್ಜಿ ವಿಚಾರಾಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ. ಎಸ್.ಕೆ ಕೌಲ್ ಅವರಿದ್ದ ವಿಭಾಗೀಯ ಪೀಠ, ಮಲ್ಯ ಅರ್ಜಿ ಕುರಿತು ಇ.ಡಿ ಪ್ರತಿಕ್ರಿಯೆ ಕೇಳಿದೆ. 
ಆರ್ಥಿಕ ಅಪರಾಧಗಳ ಕಾಯ್ದೆ 2018 ರ ಅಡಿಯಲ್ಲಿ ಮಲ್ಯ ಅವರನ್ನು ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು ಇಡಿ ವಿಶೇಷ ನ್ಯಾಯಾಲಯದ ಮೊರೆ ಹೋಗಿತ್ತು. ಈಗ ಸುಪ್ರೀಂ ಕೋರ್ಟ್ ಇಡಿ ಪ್ರತಿಕ್ರಿಯೆ ಕೇಳಿದೆ ಆದರೆ ಮುಂಬೈ ಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳಿಗೆ ತಡೆ ನೀಡಲು ನಿರಾಕರಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com