ವಾದ್ರಾ ಸಹಚರರ ಕಚೇರಿ ಮೇಲೆ ಇ.ಡಿ ದಾಳಿ: ಮೋದಿ ಸರ್ಕಾರದ ವಿರುದ್ಧ ಗುಡುಗಿದ ಕಾಂಗ್ರೆಸ್

ರಕ್ಷಣಾ ಖರೀದಿ ವ್ಯವಹಾರಗಳಲ್ಲಿ ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ಅವರ ಮೂವರು ಸಹಚರರ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ನವದೆಹಲಿ: ರಕ್ಷಣಾ ಖರೀದಿ ವ್ಯವಹಾರಗಳಲ್ಲಿ ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ಅವರ ಮೂವರು ಸಹಚರರ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರವಾಗಿ ವಾಗ್ದಾಳಿ ನಡೆಸಿದೆ. 
ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಸಂದೀಪ್ ಸುರ್ಜೇವಾಲಾ ಅವರು, ನರಸತ್ತ ಮೋದಿ ಸರ್ಕಾರ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿಯವರ ಭಾವನ ವಿರುದ್ಧ ಷಡ್ಯಂತ್ರ ರೂಪಿಸಿದೆ ಎಂದು ಹೇಳಿದ್ದಾರೆ. 
ಮುಂದಿನ ದಿನಗಳಲ್ಲಿ 5 ರಾಜ್ಯಗಳಲ್ಲೂ ಮೋದಿ ಸರ್ಕಾರ ಸೋಲು ಕಾಣಲಿದೆ. ಹೀಗಾಗಿ ಜನರ ಗಮನ ಬೇರೆಡೆಗೆ ಸೆಳೆಯಲು, ಸೋಲಿಗೆ ಪ್ರತೀಕಾರವಾಗಿ ವಾದ್ರಾ ಅವರ ವಿರುದ್ಧ ಷಡ್ಯಂತ್ರ ರಚಿಸಿದೆ. ಇಂತಹ ಹೇಡಿತನದ ವರ್ತನೆಗಳಿಗೆ ಕಾಂಗ್ರೆಸ್ ಆಗಲೀ ಜನರಾಗಲೀ ತಲೆ ಬಾಗುವುದಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com