ಬಿಜೆಪಿ ವಿರುದ್ಧ ಒಗ್ಗೂಡಿದ ವಿಪಕ್ಷಗಳು: ಟಿಡಿಪಿ ನಾಯಕ ನಾಯ್ಡು ನೇತೃತ್ವದಲ್ಲಿ ಮಹತ್ವದ ಸಭೆ

2019ರ ಲೋಕಸಭಾ ಚುನಾವಣೆಯಲವ್ಲಿ ಬಿಜೆಪಿ ವಿರುದ್ಧ ಹೋರಾಡಲು ಪ್ರಬಲ ಮೈತ್ರಿಕೂಡ ರಚನೆಗೆ ಯತ್ನ ನಡೆಸುತ್ತಲೇ ಇರುವ ವಿರೋಧ ಪಕ್ಷಗಳು, ಕಾರ್ಯತಂತ್ರ ರಚನೆಯ ನಿಟ್ಟಿನಲ್ಲಿ ಸೋಮವಾರ ರಾಜಧಾನಿ ದೆಹಲಿಯಲ್ಲಿ ಸಭೆಯೊಂದನ್ನು ಆಯೋಜಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: 2019ರ ಲೋಕಸಭಾ ಚುನಾವಣೆಯಲವ್ಲಿ ಬಿಜೆಪಿ ವಿರುದ್ಧ ಹೋರಾಡಲು ಪ್ರಬಲ ಮೈತ್ರಿಕೂಡ ರಚನೆಗೆ ಯತ್ನ ನಡೆಸುತ್ತಲೇ ಇರುವ ವಿರೋಧ ಪಕ್ಷಗಳು, ಕಾರ್ಯತಂತ್ರ ರಚನೆಯ ನಿಟ್ಟಿನಲ್ಲಿ ಸೋಮವಾರ ರಾಜಧಾನಿ ದೆಹಲಿಯಲ್ಲಿ ಸಭೆಯೊಂದನ್ನು ಆಯೋಜಿಸಿದೆ. 
ಸಭೆಯ ನೇತೃತ್ವವನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವಹು ವಹಿಸಿಕೊಂಡಿದ್ದಾರೆ. 
ಕಳೆದ ನ.22 ರಂದೇ ಈ ಸಭೆಯನ್ನು ಆಯೋಜಿಸಲಾಗಿತ್ತಾದರೂ, ಆ ಸಂದರ್ಭದಲ್ಲಿ ಪಂಚ ರಾಜ್ಯಗಳ ಚುನಾವಣೆಯಲ್ಲಿ ವಿವಿಧ ಪಕ್ಷಗಳ ನಾಯಕರು ಕಾರ್ಯನಿರತರಾಗಿದ್ದ ಕಾರಣ ಡಿ.11ಕ್ಕೆ ಮುಂದೂಡಲಾಗಿತ್ತು. 
ಸೋಮವಾರದ ಸಭೆಯಲ್ಲಿ ಯುಪಿಎ ಅಧ್ಯಕ್ಷ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಸಿಪಿಎಂ ನಾಯಕ ಸೀತಾರಾಂ ಯೆಚೂರಿ, ಸಿಪಿಐ ನಾಯಕ ಸುಧಾಕರ್ ರೆಡ್ಡಿ, ಡಿಎಂಕೆ ಅಧ್ಯಕ್ಷ ಸ್ಟಾಲಿನ್, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್, ಆರ್'ಜೆಡಿಯ ತೇಜಸ್ವಿ ಯಾದವ್, ಎಲ್'ಜೆಡಿಯ ಶರದ್ ಯಾದವ್, ನ್ಯಾಷನಲ್ ಕಾನ್ಫರೆನ್ಸ್'ನ ಫಾರುಖ್ ಅಬ್ದುಲ್ಲಾ, ಎನ್'ಸಿಪಿಯ ಶರದ್ ಪವಾರ್, ಎಸ್'ಪಿಯ ಅಖಿಲೇಶ್ ಯಾದವ್, ಬಿಎಸ್'ಯ ಸತೀಶ್ ಚಂದ್ರ ಹಾಗೂ ಇತರೆ ಸಣ್ಣಪುಟ್ಟ ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆಂದು ಹೇಳಲಾಗುತ್ತಿದೆ. 
ಇಂದು ನಡೆಯುವ ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧವಾಗಿ ವಿರೋಧ ಪಕ್ಷಗಳ ಪ್ರಬಲ ಮೈತ್ರಿಕೂಡ ರಚನೆಯ ಕುರಿತು ಚರ್ಚೆಗಳು ನಡೆಯಲಿವೆ. ಮೈತ್ರಿಕೂಟ ರಚನೆಗೆ ಅಗತ್ಯವಾದ ಮುಂದಿನ ಹಂತದ ಕಾರ್ಯತಂತ್ರದ ಬಗ್ಗೆಯೂ ಚರ್ಚೆಗಳು ನಡೆಯಲಿವೆ. 
ಇದರ ಜೊತೆಗೆ ಮಂಗಳವಾರದಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ತರಾಟೆಗೆ ತೆಗೆದುಕೊಳ್ಳುವ ಕುರಿತು ನಾಯಕರು ಸಮಾಲೋಚನೆ ನಡೆಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com