ಶಿವರಾಜ್ ಸಿಂಗ್ ಹೇಳಿಕೆಯಿಂದ ಮಧ್ಯಪ್ರದೇಶದಲ್ಲಿ ಪಕ್ಷಕ್ಕೆ ಹಿನ್ನಡೆಯುಂಟಾಗಿರಬಹುದು: ಬಿಜೆಪಿ ಸಂಸದ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾ ಹಣಿ ಏರ್ಪಟ್ಟಿದ್ದು, ಬಿಜೆಪಿ ಪಾಳಯದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಶಿವರಾಜ್ ಸಿಂಗ್ ಹೇಳಿಕೆಯಿಂದ ಮಧ್ಯಪ್ರದೇಶದಲ್ಲಿ ಪಕ್ಷಕ್ಕೆ ಹಿನ್ನಡೆಯುಂಟಾಗಿರಬಹುದು: ಬಿಜೆಪಿ ಸಂಸದ
ಶಿವರಾಜ್ ಸಿಂಗ್ ಹೇಳಿಕೆಯಿಂದ ಮಧ್ಯಪ್ರದೇಶದಲ್ಲಿ ಪಕ್ಷಕ್ಕೆ ಹಿನ್ನಡೆಯುಂಟಾಗಿರಬಹುದು: ಬಿಜೆಪಿ ಸಂಸದ
Updated on: 
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾ ಹಣಿ ಏರ್ಪಟ್ಟಿದ್ದು, ಬಿಜೆಪಿ ಪಾಳಯದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ. 
ಈ ನಡುವೆ ಬಿಜೆಪಿ ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಯ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಪಕ್ಷಕ್ಕೆ ಹಿನ್ನಡೆ ಉಂಟಾದರೆ ಅದಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಅವರ ಹೇಳಿಕೆಗಳೂ ಕಾರಣವಾಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. 
"ಪ್ರಚಾರದ ಸಂದರ್ಭದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಹೇಳಿಕೆಗಳಿಂದ ರಾಜ್ಯದ ಜನತೆ ಅಸಮಾಧಾನಗೊಂಡಿದ್ದರು" ಎಂದು ಬಿಜೆಪಿ ರಾಜ್ಯ ಸಭಾ ಸಂಸದ ರಘುನಂದನ್ ಶರ್ಮಾ ಹೇಳಿದ್ದಾರೆ.
ಚುನಾವಣೆ ವೇಳೆ ಶಿವರಾಜ್ ಸಿಂಗ್ ಚೌಹಾಣ್ ಬಳಕೆ ಮಾಡಿರುವ ಭಾಷೆ ಪಕ್ಷದ ಮೇಲೆ ಪರಿಣಾಮ ಉಂಟಾಗಿದೆ. ಆದರೆ ಚುನಾವಣೋತ್ತರ ಸಮೀಕ್ಷೆಗಳು ತ್ಪಪಾಗುವ ಸಾಧ್ಯತೆಗಳೂ ಇದೆ ಎಂದು ರಘುನಂದನ್ ಶರ್ಮಾ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com