ಇದು ಬದಲಾವಣೆಯ ಪರ್ವ, ಕಾಂಗ್ರೆಸ್ ಮೇಲೆ ದೊಡ್ಡ ಜವಾಬ್ದಾರಿ ಇದೆ: ರಾಹುಲ್ ಗಾಂಧಿ

ಬದಲಾವಣೆಯ ಪರ್ವ ಆರಂಭವಾಗಿದ್ದು, ಈಗ ಕಾಂಗ್ರೆಸ್ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.
ರಾಹುಲ್ ಗಾಂದಿ
ರಾಹುಲ್ ಗಾಂದಿ
ನವದೆಹಲಿ: ಬದಲಾವಣೆಯ ಪರ್ವ ಆರಂಭವಾಗಿದ್ದು, ಈಗ ಕಾಂಗ್ರೆಸ್ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.
ಐದು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ಫಲಿತಾಂಶ ಬಂದಿದೆ. ಇದಕ್ಕಾಗಿ ಐದು ರಾಜ್ಯಗಳ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಮತದಾರರು ಸ್ಪಷ್ಟ ಸಂದೇಶ ನೀಡಿದ್ದಾರೆ. ಮೋದಿ 2014ರಲ್ಲಿ ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. ಆದರೆ ನಾವು ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುತ್ತೇವೆ ಎಂದರು. 
ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಂದಾಗಿದ್ದು, 2019ರ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲಬೇಕು ಮತ್ತು ಗೆಲ್ಲುತ್ತೇವೆ. ಆದರೆ ಯಾರನ್ನೂ ದೇಶದಿಂದ ಹೊರ ಹಾಕುವುದಿಲ್ಲ ಎಂದು ರಾಹುಲ್ ಗಾಂಧಿ, ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಆಂದೋಲನಕ್ಕೆ ತಿರುಗೇಟು ನೀಡಿದರು.
ಐದು ರಾಜ್ಯಗಳ ಚುನಾವಣೆಯಲ್ಲಿ ನಮ್ಮ ವಿಚಾರಧಾರೆಗೆ ಗೆಲುವು ಸಿಕ್ಕಿದೆ. ಕಾಂಗ್ರೆಸ್, ಎಸ್ ಪಿ, ಮತ್ತು ಬಿಎಸ್ ಪಿ ಸಿದ್ಧಾಂತ ಒಂದೇ ಆಗಿದೆ. ಹೀಗಾಗಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ದೊಡ್ಡ ವಿಚಾರವಲ್ಲ. ಅದನ್ನು ಸುಲೀಸಾಗಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com