ಕಡಿಮೆಯಾಯ್ತಾ ಮೋದಿ ಹವಾ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ
ಮುಂಬರುವ ಲೋಕಸಭೆ ಚುನಾವಣೆಗೆ ದಿಗ್ಸೂಚಿಯಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸಗಢ, ಮಿಜೋರಾಂ ಹಾಗೂ ತೆಲಂಗಾಣದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ...
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ದಿಗ್ಸೂಚಿಯಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸಗಢ, ಮಿಜೋರಾಂ ಹಾಗೂ ತೆಲಂಗಾಣದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ.
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾದ ಪರಿಣಾಮ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯತ್ತ ಯಾವುದೇ ಕಾರ್ಯಕರ್ತರು ಬರದೆ ಕಚೇರಿ ಬಣಗುಡುತ್ತಿದೆ. ಒಟ್ಟಿನಲ್ಲಿ ಬಿಜೆಪಿ ಪ್ರದರ್ಶನ ಕಾರ್ಯಕರ್ತರಲ್ಲೂ ನಿರಾಸೆ ಮೂಡಿಸಿದೆ.
ಛತ್ತೀಸಗಢದಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ ಸಿಕ್ಕಿದೆ. ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲೂ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಿದೆ. ಇನ್ನು ತೆಲಂಗಾಣದಲ್ಲಿ ಟಿಆರ್ಎಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷ ಎಂಎನ್ಎಫ್ ಗೆ ಸ್ಪಷ್ಟಬಹುಮತ ಸಿಕ್ಕಿದೆ.