ನವದೆಹಲಿ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ರಾಜಸ್ತಾನದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ರಾಜಸ್ತಾನ ಚುನಾವಣೆಯಲ್ಲಿ ಪಕ್ಷದ ಉತ್ತಮ ಸಾಧನೆಗೆ ರಾಹುಲ್ ಗಾಂಧಿ ಕಾರಣ ಎಂಗು ಹೊಗಳಿರುವ ಗೆಹ್ಲೋಟ್, ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ರಾಹುಲ್ ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜಸ್ತಾನದಲ್ಲಿ ಪಕ್ಷಕ್ಕೆ ಸ್ಪಷ್ಚ ಬಹುಮತ ದೊರೆತು ಸರ್ಕಾರ ರಚಿಸಲಿದ್ದೇವೆ. ಸಿಎಂ ಯಾರು ಎಂಬ ಬಗ್ಗೆ ಪಕ್ಷದ ಹೈಕಮಾಂಡ್ ಮತ್ತು ಶಾಸಕರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ,
ಮೋದಿ ಅವರ ಗ್ರಾಫ್ ಕೆಳಗೆ ಬಂದಿದ್ದು ರಾಹುಲ್ ಗಾಂಧಿ ಪ್ರಮುಖ ವಿಷಯಗಳ ಬಗ್ಗೆ ದನಿ ಎತ್ತಿರುವುದು ಪಕ್ಷದ ಗೆಲುವಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.