ದೇಶ

ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭ: ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬುದನ್ನು ಪಂಚರಾಜ್ಯಗಳ ...

ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭ: ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬುದನ್ನು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ತೋರಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.
ಐದು ರಾಜ್ಯಗಳ ಪೈಕಿ ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿರುವುದು ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿರುವುದನ್ನು ತೋರಿಸುತ್ತದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಛತ್ತೀಸ್ ಗಢದಲ್ಲಿ ಸ್ಪಷ್ಟ ಬಹುಮತ ಹಾಗೂ ರಾಜಸ್ಥಾನದಲ್ಲಿ ಸರಳ ಬಹುಮತ ಪಡೆದಿರುವ ಕಾಂಗ್ರೆಸ್, ಮಧ್ಯ ಪ್ರದೇಶದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಇತರರ ಸಹಕಾರದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.