ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಗುರುತನ್ನು ಗೌಪ್ಯವಾಗಿಡಬೇಕು ಎಂದು ಸುಪ್ರೀಂ ಕೋರ್ಟ್ ಡಿ.11 ರಂದು ಹೇಳಿದೆ.
ಪ್ರಕರಣದ ಎಲ್ಲಾ ಹಂತಗಳಲ್ಲಿಯೂ ಅತ್ಯಾಚಾರ ಸಂತ್ರಸ್ತೆಯ ಗುರುತನ್ನು ರಕ್ಷಿಸಬೇಕು ಹಾಗೂ ಮಾಧ್ಯಮಗಳು ಟಿಆರ್ ಪಿ ಗಾಗಿ ಅತ್ಯಾಚಾರ ಪ್ರಕರಣಗಳನ್ನು ವೈಭವೀಕರಿಸುವುದನ್ನು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾ. ಮದನ್ ಬಿ ಲೋಕುರ್ ಹಾಗೂ ದೀಪಕ್ ಗುಪ್ತ ಅವರಿದ್ದ ವಿಭಾಗೀಯ ಪೀಠ, ಫಾರೆನ್ಸಿಕ್ ವರದಿ ಸೇರಿದಂತೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಚ್ಚಿದ ಲಕೋಟೆಗಳಲ್ಲಿ ಸಲ್ಲಿಸಬೇಕು ಎಂದು ಕೋರ್ಟ್ ಹೇಳಿದೆ.