ಇನ್ನು ಹಾಲಿ ಚುನಾವಣೆಯಲ್ಲಿ ಎಂಎನ್ಎಫ್ ಪಕ್ಷ ಸ್ಪಷ್ಟ ಬಹುಮತ ಪಡೆದಿದ್ದು, ಒಟ್ಟು 40 ಕ್ಷೇತ್ರಗಳ ಪೈಕಿ ಎಂಎನ್ಎಫ್ 29 ಕ್ಷೇತ್ಪಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆ ಮೂಲಕ ಮಿಜೋರಾಂನಲ್ಲಿ ಎಂಎನ್ಎಫ್ ಸರ್ಕಾರ ರಚನೆ ಮಾಡುವುದು ಖಚಿತವಾಗಿದ್ದು, ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಪಕ್ಷ 5ರಲ್ಲಿ ಮತ್ತು ಬಿಜೆಪಿ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ, ಇತರರು 5 ಸ್ಥಾನಗಳಲ್ಲಿ ಮುನ್ನಡೆ ಕಾಯ್ದೊಕೊಂಡಿದ್ದಾರೆ.