ಪಂಚರಾಜ್ಯ ಫಲಿತಾಂಶ: ಪ್ರಧಾನಿ ಮೋದಿ, ಡೂಪ್ಲಿಕೇಟ್ ಚಾಣಕ್ಯ ಅಮಿತ್ ಶಾಗೆ ಕಪಾಳಮೋಕ್ಷ- ಹರಿಪ್ರಸಾದ್

ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಇನ್ನು ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಈ ಚುನಾವಣೆ ಫಲಿತಾಂಶದಿಂದ...
ಪ್ರಧಾನಿ ಮೋದಿ, ಅಮಿತ್ ಶಾ, ಬಿಕೆ ಹರಿಪ್ರಸಾದ್
ಪ್ರಧಾನಿ ಮೋದಿ, ಅಮಿತ್ ಶಾ, ಬಿಕೆ ಹರಿಪ್ರಸಾದ್
ನವದೆಹಲಿ: ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಇನ್ನು ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಈ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿ, ಡೂಪ್ಲಿಕೇಟ್ ಚಾಣಕ್ಯ ಅಮಿತ್ ಶಾಗೆ ಕಪಾಳಮೋಕ್ಷವಾಗಿದೆ ಎಂದು ರಾಜ್ಯಸಭಾ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. 
ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಪಕ್ಷದ ಜಯದ ಕುರಿತಂತೆ ಮಾತನಾಡುತ್ತಿದ್ದಾರೆ. 
ಛತ್ತೀಸಗಢದಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ ಸಿಕ್ಕಿದೆ. ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲೂ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಿದೆ. ಇನ್ನು ತೆಲಂಗಾಣದಲ್ಲಿ ಟಿಆರ್ಎಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷ ಎಂಎನ್ಎಫ್ ಗೆ ಸ್ಪಷ್ಟಬಹುಮತ ಸಿಕ್ಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com