ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಆದರೆ ಮಧ್ಯ ಪ್ರದೇಶದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಆಡಳಿತಾ ರೂಢ ಬಿಜೆಪಿ ತೀವ್ರ ಪೈಪೋಟಿ ನೀಡುತ್ತಿದೆ. ಉಳಿದಂತೆ ಛತ್ತೀಸ್ ಘಡ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಅಗ್ರ ಸ್ಥಾನದಲ್ಲಿದ್ದು, ಬಿಜೆಪಿ 2ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.