ರಾಜಸ್ಥಾನ ಚುನಾವಣೆ ಫಲಿತಾಂಶ: ಸರ್ಕಾರ ರಚನೆಯತ್ತ ಕಾಂಗ್ರೆಸ್ ಸಿದ್ಧತೆ

ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಅಗತ್ಯಬಿದ್ದರೆ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಸರ್ಕಾರ ರಚಿಸುವುದಾಗಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಸಚಿನ್ ಪೈಲಟ್ , ಅಶೋಕ್  ಗೆಹ್ಲೋಟ್
ಸಚಿನ್ ಪೈಲಟ್ , ಅಶೋಕ್ ಗೆಹ್ಲೋಟ್
Updated on: 

ರಾಜಸ್ತಾನ:  ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು,  ಅಗತ್ಯಬಿದ್ದರೆ  ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಸರ್ಕಾರ ರಚಿಸುವುದಾಗಿ   ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

199 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಬಹುಮತಕ್ಕೆ 100 ಸ್ಥಾನಗಳ ಅಗತ್ಯವಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ತಳ್ಳುವ ನಿಟ್ಟಿನಲ್ಲಿ ಇತರ ಸಮಾನ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಐದು ಸ್ಥಾನಗಳಲ್ಲಿ ಕಾಂಗ್ರೆಸ್  ಚುನಾವಣೆ ಪೂರ್ವದಲ್ಲಿಯೇ ಮೈತ್ರಿ ಮಾಡಿಕೊಂಡಿತ್ತು. ಮುಂದವಾರ್ ಮತ್ತು ಕುಶಾಲ್ ಗಡದಲ್ಲಿ  -ಎಲ್ ಜೆಡಿ,  ಭರತ್ ಪುರ ಮತ್ತು ಮಾಲ್ಪುರದಲ್ಲಿ -ಆರ್ ಎಲ್ ಡಿ ಹಾಗೂ ಬಾಲಿಯಲ್ಲಿ- ಎನ್ ಸಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ರಾಜಸ್ತಾನ  ಜನರು ಕಾಂಗ್ರೆಸ್ ಪರ  ತೀರ್ಪು ನೀಡಿದ್ದು,  ಕಾಂಗ್ರೆಸ್  ಸರ್ಕಾರ ರಚನೆ ಮಾಡಲಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದರೂ ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳು ಅಥವಾ ಅಭ್ಯರ್ಥಿಗಳೊಂದಿಗೆ ಸರ್ಕಾರ ರಚಿಸುವುದಾಗಿ ಗೆಹ್ಲೋಟ್ ಹೇಳಿದ್ದಾರೆ.

ಬಿಎಸ್ ಪಿ ಮೂರು ಕ್ಷೇತ್ರಗಳಲ್ಲಿ , ಎರಡು ಸ್ಥಾನಗಳಲ್ಲಿ ಗೆಲುವು ಸೇರಿದಂತೆ ಇತರರು 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇತರ ಪಕ್ಷದ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಇತರರು ಐದು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕೆಲವರು ಕಾಂಗ್ರೆಸ್ ನಿಂದ ಬಂಡಾಯದ ಅಭ್ಯರ್ಥಿಗಳಾಗಿದ್ದು, ಸರ್ಕಾರ ರಚನೆಯಾದ್ದರೆ ಅವರು ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.

2008ರಲ್ಲಿ 96 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್  ಆರು  ಬಿಎಸ್ ಪಿ ಶಾಸಕರೊಂದಿಗೆ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com