ವಸುಂಧರಾ ರಾಜೆ
ದೇಶ
ರಾಜಸ್ಥಾನ : ಮುಖ್ಯಮಂತ್ರಿ ಹುದ್ದೆಗೆ ವಸುಂಧರಾ ರಾಜೆ ರಾಜೀನಾಮೆ
ರಾಜಸ್ತಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯದತ್ತ ಮುನ್ನುಗುತ್ತಿರುವಂತೆ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರಿಗೆ ಸಲ್ಲಿಸಿದ್ದಾರೆ.
ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯದತ್ತ ಮುನ್ನುಗುತ್ತಿರುವಂತೆ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರಿಗೆ ಸಲ್ಲಿಸಿದ್ದಾರೆ.
ಇಂದು ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಿ ವಸುಂಧರಾ ರಾಜೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಜಭವನದ ವಕ್ತಾರರು ಹೇಳಿದ್ದಾರೆ.
199 ಸದಸ್ಯರನ್ನು ಹೊಂದಿರುವ ರಾಜಸ್ಥಾನ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 88 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 11 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 72 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 0 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.


