ಪಂಚ ರಾಜ್ಯಗಳ ಪ್ರಚಂಡ ಗೆಲುವು ರಾಹುಲ್ ಗಾಂಧಿಯ ಗೆಲುವು: ಕಪಿಲ್ ಸಿಬಲ್
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ತೆಕ್ಕೆಯಲ್ಲಿದ್ದ 3 ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಯಶಸ್ವಿಯಾಗಿದ್ದು, ಪಕ್ಷದ ಗೆಲುವಿನ ಕೀರ್ತಿಯನ್ನು ಕಾಂಗ್ರೆಸ್ ನ ಸ್ಥಳೀಯ ನಾಯಕರು ರಾಹುಲ್ ಗಾಂಧಿ
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ತೆಕ್ಕೆಯಲ್ಲಿದ್ದ 3 ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಯಶಸ್ವಿಯಾಗಿದ್ದು, ಪಕ್ಷದ ಗೆಲುವಿನ ಕೀರ್ತಿಯನ್ನು ಕಾಂಗ್ರೆಸ್ ನ ಸ್ಥಳೀಯ ನಾಯಕರು ರಾಹುಲ್ ಗಾಂಧಿ ಅವರಿಗೆ ನೀಡಲು ಪ್ರಾರಂಭಿಸಿದ್ದಾರೆ.
ಚುನಾವಣಾ ಫಲಿತಾಂಶಗಳ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನ ಮಾಜಿ ಸಚಿವ ಕಪಿಲ್ ಸಿಬಲ್, ಈ ಗೆಲುವು ರಾಹುಲ್ ಗಾಂಧಿ ಅವರ ಗೆಲುವು, ಭ್ರಷ್ಟಾಚಾರದ ವಿರುದ್ಧ ಹೋರಾಡಿದ್ದ ಕಾರ್ಯಕರ್ತರ ಗೆಲುವು, ಮಾನವಿಯತೆಯ ಗೆಲುವು ಎಂದು ಬಣ್ಣಿಸಿದ್ದಾರೆ.
ಇನ್ನು ಪಂಚ ರಾಜ್ಯಗಳ ಚುನಾವಣೆ ಫಲಿತಾಂಶಕ್ಕೂ ಮುನ್ನ ವಿಪಕ್ಷಗಳ ನಾಯಕರು ಸಭೆ ನಡೆಸಿ 2019 ರ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಿದ್ದರು. ಇಂದಿನ ಚುನಾವಣೆ ಫಲಿತಾಂಶವನ್ನು 2019 ರ ಲೋಕಸಭಾ ಚುನಾವಣೆಯ ದಿಕ್ಸೂಚಿಯೆಂದೇ ಬಿಂಬಿಸಲಾಗುತ್ತಿದೆ.