ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಚಿವಾಲಯಗಳಿಗೆ ಸೂಚನೆ- ಜೀತೇಂದ್ರ ಸಿಂಗ್

ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಲು ಸದನ ಸಮಿತಿಯನ್ನು ಸ್ಥಾಪಿಸುವಂತೆ ಎಲ್ಲಾ ಸಚಿವಾಲಯಗಳು ಹಾಗೂ ಇಲಾಖೆಗಳಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದ್ದು, ಇಂತಹ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಲು  ಸದನ ಸಮಿತಿಯನ್ನು  ಸ್ಥಾಪಿಸುವಂತೆ ಎಲ್ಲಾ ಸಚಿವಾಲಯಗಳು ಹಾಗೂ ಇಲಾಖೆಗಳಿಗೆ  ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ  ಸೂಚನೆ ನೀಡಿದ್ದು, ಇಂತಹ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿರುವ ಸಿಬ್ಬಂದಿ ಮತ್ತು ಸಾರ್ವಜನಿಕ ಆಡಳಿತ ಇಲಾಖೆ ಸಚಿವ ಜೀತೇಂದ್ರ ಸಿಂಗ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ  ಮೀಸಲಾತಿ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ  ಎಲ್ಲಾ ಸಚಿವಾಲಯಗಳು ಹಾಗೂ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಸಚಿವಾಲಯ, ಇಲಾಖೆಯೊಳಗೆ ವಿಶೇಷ ಮೀಸಲಾತಿ ಘಟಕ ಸ್ಥಾಪಿಸಲು ಸೂಚನೆ ನೀಡಲಾಗಿದೆ. ಆದಾಗ್ಯೂ, ಈ ವರ್ಗಗಳಿಗೆ ಕೇಂದ್ರ ಸರ್ಕಾರಿ ಸೇವೆಯಲ್ಲಿ ಖಾಲಿ ಇರುವ ಹುದ್ದೆಗಳ  ಬಗ್ಗೆ  ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಿಂದ  ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರಿ ಸೇವೆ ಹಾಗೂ ಹುದ್ದೆಗಳಲ್ಲಿ  ಪರಿಶಿಷ್ಟ ಜಾತಿಗೆ ಶೇ.15, ಪರಿಶಿಷ್ಟ ಪಂಗಡಕ್ಕೆ ಶೇ, 7.5 ಹಾಗೂ ಹಿಂದುಳಿದ ವರ್ಗಗಳಿಗೆ ಶೇ, 27 ರಷ್ಟು ಮೀಸಲಾತಿ ನೀಡಲಾಗುತ್ತಿದೆ. 78 ಸಚಿವಾಲಯ, ಇಲಾಖೆಗಳಿಂದ ಪಡೆದ ಮಾಹಿತಿ ಪ್ರಕಾರ  ಜನವರಿ 1, 2016ಲ್ಲಿ   ಪರಿಶಿಷ್ಟ ಜಾತಿಯ ಶೇ. 17. 49 , ಪರಿಶಿಷ್ಟ ಪಂಗಡದ ಶೇ. 8. 47 ಹಾಗೂ ಹಿಂದುಳಿದ ವರ್ಗದ ಶೇ, 21. 57 ರಷ್ಟು ಮಂದಿ ಕೇಂದ್ರ ಸರ್ಕಾರಿ ಸೇವೆ ಮತ್ತು ಹುದ್ದೆಗಳಲ್ಲಿ ಇರುವುದಾಗಿ ತಿಳಿದುಬಂದಿದೆ ಎಂದರು

ಮೂಲಗಳ ಪ್ರಕಾರ ಏಪ್ರಿಲ್ 1, 2012 ರಿಂದ ಡಿಸೆಂಬರ್ 31, 2016ರವರೆಗೂ 92, 589  ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 28, 713 ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com