ಪಪ್ಪು ಈಗ 'ಪರಮ ಪೂಜ್ಯ' - ಎಂಎನ್ ಎಸ್ ಮುಖಂಡ ರಾಜ್ ಠಾಕ್ರೆ

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಾಧನೆ ಬಗ್ಗೆ ಎಂಎನ್ ಎಸ್ ಮುಖಂಡ ರಾಜ್ ಠಾಕ್ರೆ ಕೊಂಡಾಡಿದ್ದಾರೆ.
ರಾಜ್ ಠಾಕ್ರೆ
ರಾಜ್ ಠಾಕ್ರೆ
Updated on: 

ಮುಂಬೈ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಾಧನೆ ಬಗ್ಗೆ ಎಂಎನ್ ಎಸ್ ಮುಖಂಡ ರಾಜ್ ಠಾಕ್ರೆ  ಕೊಂಡಾಡಿದ್ದಾರೆ.

ಗುಜರಾತಿನಲ್ಲಿ ಏಕಾಂಗಿಯಾಗಿ ಕಾಂಗ್ರೆಸ್ ಪಕ್ಷದ ವರ್ಚಸ್ಸು ವೃದ್ದಿಸಿದ್ದ ರಾಹುಲ್ ಗಾಂಧಿ, ಕರ್ನಾಟಕದಲ್ಲಿಯೂ  ಮೈತ್ರಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ಪಂಚ ರಾಜ್ಯಗಳ ಚುನಾವಣೆಯಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ.ಪುಪ್ಪು ಈಗ ಪರಮ ಪೂಜ್ಯರಾಗಿದ್ದಾರೆ ಎಂದು ರಾಜ್ ಠಾಕ್ರೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ನಾಯಕತ್ವವನ್ನು ರಾಷ್ಟ್ರೀಯ ಮಟ್ಟದಲ್ಲಿ ಸ್ವೀಕರಿಸಲಾಗುತ್ತದೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ  ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಸಂಸದರೊಬ್ಬರು ರಾಹುಲ್ ಗಾಂಧಿ ಅವರನ್ನು ‘ಪಪ್ಪು’ ಎಂದು ವ್ಯಂಗ್ಯವಾಡಿದ್ದರು. ಇದು ವಿವಾದಕ್ಕೂ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com