ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಲೀಟರ್ ಪೆಟ್ರೋಲ್‌ಗೆ 70.20 ರೂ.ಗಳಷ್ಟಿದ್ದರೆ, ಡೀಸೆಲ್‌ಗೆ 21 ಪೈಸೆ ಕಡಿಮೆಯಾಗಿ 64.66 ರೂ.ಗಳಿಗೆ ಮಾರಾಟವಾಗುತ್ತಿದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಲೀ. ಪೆಟ್ರೋಲ್ 75.80 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀ.ಗೆ 67.66 ರೂ.ಗಳಷ್ಟಿದೆ. ಚೆನ್ನೈನಲ್ಲಿ ಪೆಟ್ರೋಲ್ ಲೀ.ಗೆ 72.82 ರೂ.ಗಳಿದ್ದರೆ, ಲೀಟರ್ ಡೀಸೆಲ್ 68.26 ರೂ.ಗಳಿಗೆ ಮಾರಾಟವಾಗುತ್ತಿದೆ. ನಿನ್ನೆಗೆ ಹೋಲಿಸಿದರೆ ಮೂರು ನಗರಗಳಲ್ಲಿ ಇಂದು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.