
ನವದೆಹಲಿ: ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ರಾಜಸ್ಥಾನದಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ನಿಯೋಗ ರಾಜಭವನದಲ್ಲಿಂದು ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರನ್ನು ಭೇಟಿ ನೀಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಇದೆ.
99 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಆರ್ ಎಲ್ ಡಿ ಜೊತೆಗೆ ಮೈತ್ರಿಯೊಂದಿಗೆ ಒಟ್ಟಾರೇ 100 ಸ್ಥಾನಗಳ ಬೆಂಬಲದಲ್ಲಿ ಸರ್ಕಾರ ರಚಿಸಲು ಮುಂದಾಗಿದೆ.
ಬಿಜೆಪಿ 73, ಬಿಎಸ್ ಪಿ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೋರಿದ್ದಾರೆ.
Advertisement