ರಾಜಸ್ಥಾನ ಸಿಎಂ ರೇಸ್: ಮುಂಚೂಣಿಯಲ್ಲಿ ಅಶೋಕ್ ಗೆಹ್ಲೋಟ್

ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್
ನವದೆಹಲಿ: ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ ಗಾದಿಗಾಗಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಗುರುವಾರ ಸಂಜೆ ವೇಳೆಗೆ ಈ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ರಾಜಸ್ಥಾನ ಮತ್ತು ಮಧ್ಯ ಪ್ರದೇಶ ಎರಡೂ ರಾಜ್ಯಗಳಲ್ಲಿ ಹಿರಿಯರು ಮತ್ತು ಕಿರಿಯರ ನಡುವೆ ಸಿಎಂ ಪಟ್ಟಕ್ಕಾಗಿ ತೀವ್ರ ಪೈಪೋಟಿ ಇದೆ. ಆದರೆ, ಹಿರಿಯರಿಗೇ ಪಟ್ಟ ಕಟ್ಟಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿರ್ಧರಿಸಿದ್ದಾರೆನ್ನುವ ಸುದ್ದಿ ಬಂದಿದೆ. 
ಮಧ್ಯಪ್ರದೇಶದಲ್ಲಿ ಕಮಲನಾಥ್ ಹಾಗೂ ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಗಳಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಮಧ್ಯಪ್ರದೇಶದಲ್ಲಿ ಬಹುಮತ ಪಡೆದ ಪಕ್ಷವಾಗಿ ಹೊರಹೊಮ್ಮಿದ ಕಾಂಗ್ರೆಸ್​ಗೆ ಬಹುಜನ ಸಮಾಜ ಪಕ್ಷ ಬೆಂಬಲ ನೀಡಿದೆ. 72 ವರ್ಷದ ಕಮಲನಾಥ್​ಗೆ ಈಗಾಗಲೇ ಎಲ್ಲ ಕಾಂಗ್ರೆಸ್ ಶಾಸಕರು ಬೆಂಬಲ ನೀಡಿದ್ದಾರೆನ್ನಲಾಗಿದೆ. ಅತ್ತ ಜ್ಯೋತಿರಾದಿತ್ಯ ಸಿಂದ್ಯ ಕೂಡ ತಮಗೂ ಅಪಾರ ಬೆಂಬಲವಿದೆ ಎಂದು ಹೈ ಕಮಾಂಡ್​ ಮುಂದೆ ವಾದ ಮಂಡಿಸಿದ್ದರು. ತಾವು ಕೂಡ ಮುಖ್ಯಮಂತ್ರಿಯಾಗುವ ಇರಾದೆ ಹೊಂದಿರುವುದಾಗಿ ಸಿಂದ್ಯಾ ತಿಳಿಸಿದ್ದರು.
ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್​ ಅನುಭವ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್​ ಉತ್ಸಾಹ ಉತ್ತಮ ಕಾರ್ಯನಿರ್ವಹಿಸಿದ್ದು, ಯಾರಿಗಲಿದ್ದಾರೆ ಸಿಎಂ ಎಂಬು ಕುತೂಹಲ ಎಲ್ಲರಲ್ಲಿಯೂ ಮನೆ ಮಾಡಿದೆ.
ಕಮಲ್ ನಾಥ್, ಜೋತಿರಾದಿತ್ಯ ಸಿಂದ್ಯ, ಸಚಿನ್ ಪೈಲಟ್ ಹಾಗೂ ಅಶೋಕ್ ಗೆಹ್ಲೋಟ್ ನಾಲ್ವರು ದೆಹಲಿಗೆ ತೆರಳಿದ್ದು, ಇಂದು ಸಂಜೆ ರಾಜಸ್ಥಾನ ಮತ್ತು ಮಧ್ಯ ಪ್ರದೇಶ ಮುಖ್ಯಮಂತ್ರಿಗಳ ಹೆಸರು ಬಹಿರಂಗವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com