ಪಾಟ್ನಾ: ಬುಧವಾರ ಪ್ರಕಟವಾದ ಪಂಚರಾಜ್ಯಗಳ ಚುನಾವಣೆಯಲ್ಲಿ ರಾಜಸ್ತಾನ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿ ಉತ್ತಮ ಹೋರಾಟ ನೀಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮಧ್ಯ ಪ್ರದೇಶ ಮತ್ತು ರಾಜಸ್ತಾನದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದೆ. ಜನ ನಮ್ಮನ್ನು ಬೆಂಬಲಿಸಿದ್ದಾರೆ.
ಪ್ರಜಾಪ್ರಭುತ್ವ ಎಂಬ ನಾಣ್ಯದಲ್ಲಿ ಗೆಲುವು ಹಾಗೂ ಸೋಲು ಎಂಬುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ನಾವು ಇವಿಎಂ ಯಂತ್ರದ ಸಾಮರ್ಥ್ಯವನ್ನು ನಾವು ಪ್ರಶ್ನಿಸುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೂ ರಾಜಸ್ತಾನ ಮತ್ತು ಮಧ್ಯಪ್ರದೇಶಗಳಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಗೆ ಬಿಎಸ್ ಪಿ ಬೆಂಬಲ ನೀಡಿದೆ.