ಬಿಜೆಪಿಯ ಕೌಂಟ್ ಡೌನ್ ಆರಂಭ: ಚುನಾವಣಾ ಫಲಿತಾಂಶ ಕುರಿತು ಉಪೇಂದ್ರ ಕುಶ್ವಾಹ ಹೇಳಿಕೆ

ಪಂಚ ರಾಜ್ಯಗಳ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಕೇಸರಿ ಪಕ್ಷದ ಕೌಂಟ್ ಡೌನ್ ಆರಂಭವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ರಾಷ್ಟ್ರೀಯ ಲೋಕ ಸಮತಾ ಪಾರ್ಟಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪುಣೆ:  ಪಂಚ ರಾಜ್ಯಗಳ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಕೇಸರಿ ಪಕ್ಷದ ಕೌಂಟ್ ಡೌನ್ ಆರಂಭವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ  ರಾಷ್ಟ್ರೀಯ ಲೋಕ ಸಮತಾ ಪಾರ್ಟಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಹೇಳಿದ್ದಾರೆ.

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎರಡು ದಿನಗಳ ಬಳಿಕ  ಉಪೇಂದ್ರ ಕುಶ್ವಾಹ ಈ ರೀತಿಯಲ್ಲಿ ಹೇಳಿಕೆ ನೀಡಿದ್ದು,  ಪ್ರಧಾನಿ ನರೇಂದ್ರ ಮೋದಿ  ಹಿಂದುಳಿದ ವರ್ಗಗಳಿಗೆ ದ್ರೋಹ ಬಗೆದಿದ್ದಾರೆ. ಬಿಹಾರಕ್ಕೆ ಏನೂ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಅಭಿವೃದ್ಧಿ ಸಿದ್ದಾಂತದ ಮೇಲೆ ಬಿಜೆಪಿಗೆ ಸೇರ್ಪಡೆಯಾಗಿದ್ದೆ. ಆದರೆ.  ಆರ್ ಎಸ್ ಎಸ್  ಸ್ವಂತ ಸಿದ್ದಾಂತದ ಅಭಿವೃದ್ದಿಗಾಗಿ ಕಾರ್ಯನಿರ್ವಹಿಸುತ್ತಾರೆ ಎಂಬುದು ಒಂದು ವರ್ಷದ ನಂತರ ಮನವರಿಕೆಯಾಯಿತು. ಆದ್ದರಿಂದ ಎನ್ ಡಿಎ ಜೊತೆಗಿನ ಮೈತ್ರಿ ಮುರಿದುಕೊಂಡಿದ್ದಾಗಿ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಸೋತರೆ ವಿಶ್ವದಲ್ಲಿನ ಯಾವ ಶಕ್ತಿಯೂ ರಕ್ಷಿಸಲಾರವು, ಹಿಂದಿಯ ಹೃದಯ ಭಾಗದ ರಾಜ್ಯಗಳಲ್ಲಿ ಬಿಜೆಪಿ ಸೋಲಿಗೆ ಶರಣಾದ ನಂತರ ಅದರ ಕೌಂಟ್ ಡೌನ್ ಆರಂಭವಾಗಿದೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಮೈತ್ರಿಕೂಟದ ಬಗ್ಗೆ ಸೇರುವ ಬಗ್ಗೆ ಚರ್ಚೆ ನಡೆಸಿ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com